7ನೇ ತರಗತಿ ಹವಾಮಾನ, ವಾಯುಗುಣ ಮತ್ತು ವಾಯುಗುಣಕ್ಕೆ ಪ್ರಾಣಿಗಳ ಹೊಂದಾಣಿಕೆ‌ ವಿಜ್ಞಾನ ನೋಟ್ಸ್ | 7th Standard Science Chapter 7 Question Answer in Kannada

7ನೇ ತರಗತಿ ಹವಾಮಾನ, ವಾಯುಗುಣ ಮತ್ತು ವಾಯುಗುಣಕ್ಕೆ ಪ್ರಾಣಿಗಳ ಹೊಂದಾಣಿಕೆ‌ ವಿಜ್ಞಾನ ನೋಟ್ಸ್ Pdf, 7th Standard Science Chapter 7 Notes in Kannada Medium Kseeb Solutions For Class 7 Science Chapter 7 Notes Question Answer Class 7 Science Chapter 7 Notes in Kannada Medium 7th Havamana Vayuguna Mattu Vayugunakke Pranigala Hondanike Notes

Contents

7th Standard Science Chapter 7 Question Answer in Kannada

ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ,

1) ಒಂದು ಪ್ರದೇಶದ ಹವಾಮಾನವನ್ನು ನಿರ್ಧರಿಸುವ ಅಂಶಗಳನ್ನು ಹೆಸರಿಸಿ,

ಒಂದು ಪ್ರದೇಶದ ಹವಾಮಾನವನ್ನು ನಿರ್ಧರಿಸುವ ಅಂಶಗಳು ತಾಪ, ಆದ್ರ್ರತೆ, ಮಳೆ ಮತ್ತು ಗಾಳಿಯ ಜವ.

2) ಗರಿಷ್ಠ ಹಾಗೂ ಕನಿಷ್ಠ ತಾಪವು ದಿನದ ಯಾವ ಸಮಯದಲ್ಲಿ ಕಂಡುಬರುತ್ತದೆ?

ಸಾಧಾರಣವಾಗಿ ಮಧ್ಯಾಹ್ನದ ಸಮಯದಲ್ಲಿ ಗರಿಷ್ಠ ತಾಪ ಮತ್ತು ಮುಂಜಾನೆ ಸಮಯದಲ್ಲಿ ಕನಿಷ್ಠ ತಾಪ ಕಂಡುಬರುತ್ತದೆ.

3) ಬಿಟ್ಟ ಸ್ಥಳ ತುಂಬಿ :

1) ದೀರ್ಘ ಕಾಲಾವಧಿಯ ಸಮಯದಲ್ಲಿ ತೆಗೆದುಕೊಂಡ ಹವಾಮಾನದ ಸರಾಸರಿಯನ್ನು ವಾಯುಗುಣ ಎನ್ನುವರು.

2) ವರ್ಷವಿಡೀ ಅತಿ ಹೆಚ್ಚು ತಾಪ ಮತ್ತು ಅತಿ ಕಡಿಮೆ ಮಳೆ ಇದ್ದರೆ ಆ ಪ್ರದೇಶದ ವಾಯುಗುಣ ಉಷ್ಣ ಮತ್ತು ಶುಷ್ಕ ಆಗಿರುತ್ತದೆ.

3) ಹವಾಮಾನ ವೈಪರೀತ್ಯ ಹೊಂದಿರುವ ಭೂಮಿಯ ಎರಡು ಪ್ರದೇಶಗಳೆಂದರೆ ಧ್ರುವ ಪ್ರದೇಶ ಮತ್ತು ಮರುಭೂಮಿ

4. ಹವಾಮಾನ ಅಥವಾ ವಾಯುಗುಣ ಈ ಎರಡರಲ್ಲಿ ಯಾವುದು ಆಗಾಗ್ಗೆ ಬದಲಾಗುತ್ತದೆ?

ಹವಾಮಾನ

5, ಉಷ್ಣವಲಯದ ಮಳೆಕಾಡುಗಳಲ್ಲಿ ಬಹಳ ಪ್ರಾಣಿಗಳು ಕಂಡುಬರುತ್ತವೆ. ಕಾರಣವೇನು?

ನಿರಂತರವಾದ ಮಳೆ ಮತ್ತು ಬೆಚ್ಚನೆಯ ವಾತಾವರಣದಿಂದಾಗಿ ಈ ಪ್ರದೇಶವು ಹಲವಾರು ಜಾತಿಯ ಗಿಡಮರಗಳನ್ನು ಹಾಗೂ ಪ್ರಾಣಿಗಳನ್ನು ಪೋಷಿಸುತ್ತದೆ. ಅನುಕೂಲಕರ ವಾಯುಗುಣದ ಪರಿಸ್ಥಿತಿಯಿಂದಾಗಿ ಉಷ್ಣವಲಯದ ಮಳೆಕಾಡುಗಳಲ್ಲಿ ಬಹಳಷ್ಟು ಸಂಖ್ಯೆಯ ಪ್ರಾಣಿ ಹಾಗೂ ಸಸ್ಯಗಳನ್ನು ಕಾಣಬಹುದಾಗಿದೆ.

6. ಕೆಲವು ಜಾತಿಯ ಪ್ರಾಣಿಗಳು ನಿರ್ದಿಷ್ಟ ವಾಯುಗುಣದಲ್ಲಿ ಮಾತ್ರ ಕಂಡುಬರುತ್ತವೆ ಎಂಬುದನ್ನು ಸೂಕ್ತ ಉದಾಹರಣೆಗಳೊಂದಿಗೆ ವಿವರಿಸಿ,

ಎಲ್ಲಾ ಪ್ರಾಣಿಗಳು ತಾವು ವಾಸಿಸುವ ಪ್ರದೇಶಗಳಲ್ಲಿ ಬದುಕುವ ಸಲುವಾಗಿ ಸುತ್ತಲಿನ ಪರಿಸ್ಥಿತಿಗಳಿಗೆ ಅನುಗುಣವಾಗಿ ಹೊಂದಾಣಿಕೆ ಮಾಡಿಕೊಂಡಿರುತ್ತವೆ. ವಿಪರೀತ ಶೀತ ಅಥವಾ ಉಷ್ಣತೆಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಹೆಚ್ಚಿನ ಶೀತ ಅಥವಾ ಉಷ್ಣ ಪ್ರದೇಶದಲ್ಲಿ ವಾಸಿಸುವ ಪ್ರಾಣಿಗಳು ವಿಶೇಷ ಲಕ್ಷಣಗಳನ್ನು ಹೊಂದಿರಬೇಕಾಗುತ್ತದೆ. ಒಂದು ನಿರ್ದಿಷ್ಟ ವಾಯುಗುಣದಲ್ಲಿ ವಾಸಿಸಲು ಹೊಂದಾಣಿಕೆ ಮಾಡಿಕೊಂಡಿರುವ ಜೀವಿಯು ಬೇರೆ ವಾಯುಗುಣದಲ್ಲಿ ಬದುಕುವುದು ಸಾಧ್ಯವಾಗುವುದಿಲ್ಲ.

ಉದಾಹರಣೆಗೆ 1.ಹಿಮ ಪ್ರದೇಶದಲ್ಲಿ ವಾಸಿಸುವ ಹಿಮಕರಡಿ, ಪೆಂಗ್ವಿನ್‌ ನಂತಹ ಧ್ರುವ ಪ್ರದೇಶದ ಪ್ರಾಣಿಗಳು ಅಲ್ಲಿನ ವಿಪರೀತ ಚಳಿಯ ಪರಿಸ್ಥಿತಿಗೆ ಹೊಂದಾಣಿಕೆ ಮಾಡಿಕೊಂಡಿರುತ್ತವೆ. ಶ್ವೇತ ತುಪ್ಪಳ, ತೀಕ್ಷ್ಯ ಘಾಣಶಕ್ತಿ, ಚರ್ಮದ ಆಡಿ ಕೊಬ್ಬಿನ ಪದರ, ನಡೆಯಲು ಮತ್ತು ಈಜಲು ಆಗಲವಾದ ದೊಡ್ಡ ಪಂಜಗಳು ಪಾಣಿಗಳ ಕೆಲವು ವೈಶಿಷ್ಟ್ಯಗಳು,

2. ಉಷ್ಣವಲಯದ ಮಳೆಕಾಡುಗಳಲ್ಲಿ ವಾಸಿಸುವ ಮಂಗ, ವಾನರ, ಗೊರಿಲ್ಲಾ, ಹುಲಿ, ಆನೆ, ಚಿರತೆ. ಮುಂತಾದ ಪ್ರಾಣಿಗಳು,ಮರದ ಮೇಲೆ ವಾಸಿಸುವುದು, ಉದ್ದನೆಯ ಶಕ್ತಿಯುತವಾದ ಬಾಲ, ಉದ್ದ ಹಾಗೂ ದೊಡ್ಡದಾದ ಕೊಕ್ಕು, ಗಾಢವರ್ಣ, ನಿಖರ ಆಕೃತಿಗಳು, ದೊಡ್ಡ ಸ್ವರ, ಹಣ್ಣಿನ ಆಹಾರ, ಸೂಕ್ಷ್ಮ ಶ್ರವಣಶಕ್ತಿ, ತೀಕ್ಷ್ಯದೃಷ್ಟಿ, ದಪ್ಪಚರ್ಮ, ಪರಭಕ್ಷಕ ಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಕಪಟ ರೂಪ ಧರಿಸುವುದು ಮುಂತಾದ ಹೊಂದಾಣಿಕೆಗಳನ್ನು ಮಾಡಿಕೊಂಡಿರುತ್ತವೆ.

7. ಉಷ್ಣವಲಯದ ಮಳೆಕಾಡಿನ ಪರಿಸ್ಥಿತಿಗೆ ಆನೆಯು ಹೇಗೆ ಹೊಂದಾಣಿಕೆ ಮಾಡಿಕೊಂಡಿದೆ?

ಉಷ್ಣವಲಯದ ಮಳೆಕಾಡುಗಳಲ್ಲಿ ವಾಸಿಸುವ ಆನೆಯು ಅಲ್ಲಿನ ಪರಿಸ್ಥಿತಿಗಳಿಗೆ ಗಮನಾರ್ಹವಾಗಿ ಹೊಂದಾಣಿಕೆ ಮಾಡಿಕೊಂಡಿದೆ. ಅದರ ಸೊಂಡಿಲು ತೀವ್ರ ಘಾಣಶಕ್ತಿಯನ್ನು ಹೊಂದಿದ್ದು ಅದನ್ನು ನಾಸಿಕದಂತೆ ಉಪಯೋಗಿಸುತ್ತದೆ. ಅದು ಆಹಾರವನ್ನು ಎತ್ತಿಕೊಳ್ಳಲೂ ಸೊಂಡಿಲನ್ನು ಉಪಯೋಗಿಸುತ್ತದೆ. ಅದರ ದಂತಗಳು ರೂಪಾಂತರಗೊಂಡ ಹಲ್ಲುಗಳಾಗಿದ್ದು, ತಾನು ತಿನ್ನ ಬಯಸುವ ಮರದ ತೊಗಟೆಯನ್ನು ಸೀಳಲು ನೆರವಾಗುತ್ತವೆ. ಆನೆಯು ಆಹಾರದ ಪೈಪೋಟಿಯನ್ನು ಎದುರಿಸಲು ಸಮರ್ಥವಾಗಿದೆ. ಅದರ ದೊಡ್ಡ ಕಿವಿಗಳು ಅತಿ ಸೂಕ್ಷ್ಮ ಸಪ್ಪಳವನ್ನೂ ಕೇಳಲು ಸಹಕಾರಿಯಾಗಿವೆ. ಅಲ್ಲದೆ ಉಷ್ಣ-ತೇವಭರಿತ ಮಳೆಕಾಡಿನ ವಾಯುಗುಣದಲ್ಲಿ ಆನೆಯನ್ನು ತಂಪಾಗಿರಿಸಲು ಕೂಡ ಸಹಾಯ ಮಾಡುತ್ತವೆ.

ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಬಲ್ಲ ಸೂಕ್ತ ಆಯ್ಕೆಯನ್ನು ಆರಿಸಿಕೊಳ್ಳಿ.

8. ಮೈಮೇಲೆ ಪಟ್ಟೆಯುಳ್ಳ ಮಾಂಸಾಹಾರಿಯು ತನ್ನ ಬೇಟೆಯನ್ನು ಹಿಡಿಯಲು ಶೀಘ್ರವಾಗಿ ಚಲಿಸುತ್ತದೆ. ಇದನ್ನು ನಾವು ಇಲ್ಲಿ ಕಾಣಬಹುದು.

(i) ಧ್ರುವ ಪ್ರದೇಶಗಳು

(ii) ಮರುಭೂಮಿಗಳು

(iii) ಸಾಗರಗಳು

(iv) ಉಷ್ಣವಲಯದ ಮಳೆಕಾಡುಗಳು

ಉತ್ತರ:-(iv) ಉಷ್ಣವಲಯದ ಮಳೆಕಾಡುಗಳು

9. ಧ್ರುವ ಪ್ರದೇಶದ ವಿಪರೀತ ಚಳಿಯ ಸ್ಥಿತಿಗೆ ಹೊಂದಿಕೊಳ್ಳಲು ಯಾವ ವೈಶಿಷ್ಟ್ಯಗಳು ಹಿಮಕರಡಿಗೆ ನೆರವಾಗುತ್ತವೆ?

(ಎ) ಶ್ವೇತ ತುಪ್ಪಳ, ಚರ್ಮದಡಿ ಕೊಬ್ಬು, ತೀಕ್ಷ್ಣ ಪ್ರಾಣಶಕ್ತಿ

(ಬಿ) ತೆಳು ಚರ್ಮ, ದೊಡ್ಡ ಕಣ್ಣು, ಶ್ವೇತ ತುಪ್ಪಳ

(ಸಿ) ಉದ್ದನೆಯ ಬಾಲ, ಬಲವಾದ ಉಗುರು, ಬೆಳ್ಳಗಿನ ದೊಡ್ಡಪಂಜ

(ಡಿ) ಬಿಳಿದೇಹ, ಈಜಾಡಲು ಪಂಜ, ಉಸಿರಾಡಲು ಕಿವಿರುಗಳು

ಉತ್ತರ:- (ಎ) ಶ್ವೇತ ತುಪ್ಪಳ, ಚರ್ಮದಡಿ ಕೊಬ್ಬು, ತೀಕ್ಷ್ಣ ಪ್ರಾಣಶಕ್ತಿ

10. ಕೆಳಗಿನ ಯಾವ ಆಯ್ಕೆಯು ಉಷ್ಣವಲಯದ ಮಳೆಕಾಡನ್ನು ಉತ್ತಮವಾಗಿ ವರ್ಣಿಸುತ್ತದೆ?

(ಎ) ಉಷ್ಣ ಮತ್ತು ಆದ್ರತೆ

(ಬಿ) ಮಧ್ಯಮ ತಾಪ, ಅಧಿಕ ಮಳೆ

(ಸಿ) ಚಳಿ ಮತ್ತು ಆದ್ರತೆ

(ಡಿ) ಉಷ್ಣ ಮತ್ತು ಒಣಹವೆ

ಉತ್ತರ:-(ಎ) ಉಷ್ಣ ಮತ್ತು ಆದ್ರತೆ

FAQ

1. ಗರಿಷ್ಠ ಹಾಗೂ ಕನಿಷ್ಠ ತಾಪವು ದಿನದ ಯಾವ ಸಮಯದಲ್ಲಿ ಕಂಡುಬರುತ್ತದೆ?

ಒಂದು ಪ್ರದೇಶದ ಹವಾಮಾನವನ್ನು ನಿರ್ಧರಿಸುವ ಅಂಶಗಳು ತಾಪ, ಆದ್ರ್ರತೆ, ಮಳೆ ಮತ್ತು ಗಾಳಿಯ ಜವ.

2, ಉಷ್ಣವಲಯದ ಮಳೆಕಾಡುಗಳಲ್ಲಿ ಬಹಳ ಪ್ರಾಣಿಗಳು ಕಂಡುಬರುತ್ತವೆ. ಕಾರಣವೇನು?

ನಿರಂತರವಾದ ಮಳೆ ಮತ್ತು ಬೆಚ್ಚನೆಯ ವಾತಾವರಣದಿಂದಾಗಿ ಈ ಪ್ರದೇಶವು ಹಲವಾರು ಜಾತಿಯ ಗಿಡಮರಗಳನ್ನು ಹಾಗೂ ಪ್ರಾಣಿಗಳನ್ನು ಪೋಷಿಸುತ್ತದೆ. ಅನುಕೂಲಕರ ವಾಯುಗುಣದ ಪರಿಸ್ಥಿತಿಯಿಂದಾಗಿ ಉಷ್ಣವಲಯದ ಮಳೆಕಾಡುಗಳಲ್ಲಿ ಬಹಳಷ್ಟು ಸಂಖ್ಯೆಯ ಪ್ರಾಣಿ ಹಾಗೂ ಸಸ್ಯಗಳನ್ನು ಕಾಣಬಹುದಾಗಿದೆ.

ಇತರೆ ವಿಷಯಗಳು :

7ನೇ ತರಗತಿ ಕನ್ನಡ ನೋಟ್ಸ್

7ನೇ ತರಗತಿ ಇಂಗ್ಲಿಷ್‌ ನೋಟ್ಸ್

7ನೇ ತರಗತಿ ಸಮಾಜ ವಿಜ್ಞಾನ ನೋಟ್ಸ್‌

1 ರಿಂದ 10ನೇ ತರಗತಿ ಪಠ್ಯಪುಸ್ತಕಗಳು Pdf

1 ರಿಂದ 9ನೇ ತರಗತಿ ಕಲಿಕಾ ಚೇತರಿಕೆ Pdf

1 ರಿಂದ 12ನೇ ತರಗತಿ ಕನ್ನಡ ನೋಟ್ಸ್‌ Pdf

All Notes App

Leave a Reply

Your email address will not be published. Required fields are marked *