100+ ಬಸವಣ್ಣನ ವಚನಗಳು | Basavanna Vachana in Kannada Vachanagalu

100+ ಬಸವಣ್ಣನ ವಚನಗಳು | Basavanna Vachana in Kannada Vachanagalu

100+ Basavanna Vachana in Kannada  ಬಸವಣ್ಣನ ವಚನಗಳು  kannada vachanagalu, basavannana famous vachanagalu, 50+ basavannana vachanagalu, ಬಸವಣ್ಣನ ವಚನಗಳು.

About Basavanna in Kannada

ಬಸವಣ್ಣನ ಪರಿಚಯ

ಬಸವಣ್ಣ  ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು.

ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು.

ತನ್ನ ಸಾಮ್ರಾಜ್ಯದ ಮುಖ್ಯಮಂತ್ರಿಯಾಗಿ, ಅವರು ಅನುಭವ ಮಂಟಪ, ಇಲ್ಲಿ ಎಲ್ಲಾ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ಪುರುಷ ಮತ್ತು ಮಹಿಳೆಯರು ಆಧ್ಯಾತ್ಮಿಕ ಮತ್ತು ಪ್ರಾಪಂಚಿಕ ಪ್ರಶ್ನೆಗಳನ್ನು ಮುಕ್ತವಾಗಿ ಚರ್ಚಿಸಲು ಸ್ವಾಗತಿಸಿತು.ಬಸವಣ್ಣನವರ ಜೊತೆ ೭೭೦ ಅಮರಗಣಂಗಳು ಇದ್ದರೆಂದು ಮತ್ತು ೧,೯೬,೦೦೦ ಶರಣರಿದ್ದರೆಂದು ಐತಿಹಾಸಿಕ ಪುರಾವೆಗಳಿವೆ.

ಬಸವಣ್ಣನವರು ೧೧೩೪ ರಲ್ಲಿ ಈಗಿನ ಬಿಜಾಪುರ ಜಿಲ್ಲೆಯಲ್ಲಿರುವ ಬಸವನ ಬಾಗೇವಾಡಿ ಗ್ರಾಮದಲ್ಲಿ (ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ

ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು.

ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ ೮ನೇ ವಯಸ್ಸಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾರೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ಹೊರಡುತ್ತಾರೆ

ಬಸವಣ್ಣ ಹನ್ನೆರಡು ವರ್ಷಗಳ ಕಾಲ ಕುಂಡಲಸಂಗಮದಲ್ಲಿ ಹಿಂದೂ ದೇವಸ್ಥಾನದಲ್ಲಿ ಅಧ್ಯಯನ ಮಾಡುತ್ತಿದ್ದರು.ನಂತರ ಲಕುಲಿಶಾ-ಪಶುಪಾಟ ಸಂಪ್ರದಾಯದ ಒಂದು ಶೈವ ಕಲಿಕೆಯ ಕಲಿಕೆಯಲ್ಲಿ ಸಂಗಮೇಶ್ವರದಲ್ಲಿ ಮುಗಿಸಿದರು

ಬಸವ ತನ್ನ ತಾಯಿಯ ಕಡೆಯಿಂದ ಸೋದರ ಸಂಬಂಧಿಯನ್ನು ಮದುವೆಯಾದ. ಅವರ ಪತ್ನಿ ಗಂಗಾಂಬಿಕೆ ಕಲಚುರಿ ರಾಜ ಬಿಜ್ಜಳ ಪ್ರಧಾನ ಮಂತ್ರಿಯ ಮಗಳು,

Basavanna Information In Kannada

ಜನನ : ಕ್ರಿ.ಶ. ೧೧೩೪

ಬಸವನ ಬಾಗೇವಾಡಿ ವಿಜಯಪುರ ಜಿಲ್ಲೆ, ಕರ್ನಾಟಕ, ಭಾರತ

ಮರಣ : ಕ್ರಿ.ಶ. ೧೧೯೬
ಕೂಡಲಸಂಗಮ, ಕರ್ನಾಟಕ, ಭಾರತ

ಗೌರವಗಳು : ಜಗಜ್ಯೋತಿ ಬಸವೇಶ್ವರ, ಕ್ರಾಂತಿಯೋಗಿ ಬಸವಣ್ಣ, ಭಕ್ತಿ ಭಂಡಾರಿ ಬಸವಣ್ಣ, ಮಹಾ ಮಾನವತಾ ವಾದಿ

ತತ್ವಶಾಸ್ತ್ರ : ಶರಣ ಶರಣೆಯರ ಲಿಂಗಾಯತ ದರ್ಶನ”,

ಪ್ರಮುಖ ಕೃತಿಗಳು : ವಚನ ಸಾಹಿತ್ಯ ವಚನಗಳು

ನುಡಿ : ಅರಿತಡೆ ಶರಣ-ಮರೆತಡೆ ಮಾನವ , ಕಾಯಕ ದಾಸೋಹ , ಜಂಗಮ

 

ಬಸವಣ್ಣನ ವಚನಗಳು

 

1. ಉದಕದೊಳಗೆ ಬಚ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು,
ಸಸಿಯೊಳಗಣ ರಸದ ರುಚಿಯಂತಿದ್ದಿತ್ತು,
ನನೆಯೊಳಗಣ ಪರಿಮಳದಂತಿದ್ದಿತ್ತು,
ನಿಮ್ಮ ನಿಲುವು ಕೂಡಲಸಂಗಮದೇವಾ,
ಕನ್ಯೆಯ ಸ್ನೇಹದಂತಿದ್ದಿತ್ತು.

2. ಕಾಳಿಯ ಕಣ್ ಕಾಣದಿಂದ ಮುನ್ನ,
ತ್ರಿಪುರ ಸಂಹಾರದಿಂದ ಮುನ್ನ,
ಹರಿವಿರಂಚಿಗಳಿಂದ ಮುನ್ನ,
ಉಮೆಯ ಕಳ್ಯಾಣದಿಂದ ಮುನ್ನ,
ಮುನ್ನ, ಮುನ್ನ, ಮುನ್ನ,
– ಅಂದಿಂಗೆಳೆಯ ನೀನು,
ಹಳೆಯ ನಾನು ಮಹಾದಾನಿ ಕೂಡಲಸಂಗಮದೇವಾ.

3.  ಕರಿಯಂಜುವುದು ಅಂಕುಶಕ್ಕಯ್ಯಾ,
ಗಿರಿಯಂಜÅವುದು ಕುಲಿಶಕ್ಕಯ್ಯಾ,
ತಮಂಧವಂಜುವುದು ಜ್ಯೋತಿಗಯ್ಯಾ,
ಕಾನನವಂಜುವುದು ಬೇಗೆಗಯ್ಯಾ,
ಪಂಚಮಹಾಪಾತಕವಂಜುವುದು
ಕೂಡಲಸಂಗನ ನಾಮಕ್ಕಯ್ಯಾ

4. ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದೊಡೆ ನಿಮ್ಮಾಣೆ, ನಿಮ್ಮ
ಪ್ರಮಥರಾಣೆ! ನಿಮ್ಮ ಪ್ರಸಾದಕ್ಕಲ್ಲದೆ ಬಾಯ್ದೆರೆಯೆನಯ್ಯಾ, ಪ್ರಥಮ ಭವಾಂತರದಲ್ಲಿ
ಶಿಲಾದನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಭೃತ್ಯನ ಮಾಡಿಯೆನ್ನ
ನಿರಿಸಿಕೊಂಡಿರ್ದಿರಯ್ಯಾ, ಎರಡನೆಯ ಭವಾಂತರದಲ್ಲಿ ಸ್ಕಂದನೆಂಬ ಗಣೇಶ್ವರನ
ಮಾಡಿ ಹೆಸರಿಟ್ಟು ಕರೆದು ನಿಮ್ಮ ಕಾರುಣ್ಯವ ಮಾಡಿಸಿಕೊಂಡಿರ್ದಿರಯ್ಯಾ,
ಮೂರನೆಯ ಭವಾಂತರದಲ್ಲಿ ನೀಲಲೋಹಿತನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ನಿಮ್ಮ ಲೀಲಾ ವಿನೋದದಿಂದಿರಿಸಿಕೊಂಡಿರ್ದಿರಯ್ಯಾ,
ನಾಲ್ಕನೆಯ ಭವಾಂತರದಲ್ಲಿ ಮನೋಹರನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ನಿಮ್ಮ ಮನಃ ಪ್ರೇರಕನಾಗಲೆಂದಿರಿಸಿಕೊಂಡಿರ್ದಿರಯ್ಯಾ.
ಐದನೆಯ ಭವಾಂತರದಲ್ಲಿ ಕಾಲಲೋಚನನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ಸರ್ವಕಾಲ ಸಂಹಾರವ ಮಾಡಿಸುತ್ತಿರ್ದಿರಯ್ಯಾ.
ಆರನೆಯ ಭವಾಂತರದಲ್ಲಿ ವೃಶ್ಹಭನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ನಿಮಗೇರಲು ವಾಹನವಾಗಲೆಂದಿರಿಸಿಕೊಂಡಿರ್ದಿರಯ್ಯಾ.
ಏಳನೆಯ ಭವಾಂತರದಲ್ಲಿ ಬಸವನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ನಿಮ್ಮೊಕ್ಕುದಮಿಕ್ಕುದಕ್ಕೆ ಯೋಗ್ಯನಾಗಲೆಂದಿರಿಸಿಕೊಂಡಿರ್ದಿರಯ್ಯಾ.
ಇದು ಕಾರಣ ಕೂಡಲಸಂಗಮದೇವಾ, ನೀವು ಬರಿಸಿದ ಭವಾಂತರದಲ್ಲಿ ನಾನು
ಬರುತಿರ್ದೆನಯ್ಯಾ.

5. ಅಯ್ಯಾ, ನಿಮ್ಮ ಶರಣನ ಮರ್ತ್ಯಕ್ಕೆ ತಂದೆಯಾಗಿ ನೆನೆನೆನೆದು
ಸುಖಿಯಾಗಿಯಾನು ಬದುಕಿದೆನಯ್ಯಾ. ಅದೇನು ಕಾರಣ
ತಂದೆಯಿಂದರಿದೆನಯ್ಯಾ. ಅರಿದರಿದು ನಿಮ್ಮ ಶರಣನು
ಆಚರಿಸುವಾಚರಣೆಯ ಕಂಡು ಕಣ್ದೆರೆದೆನಯ್ಯಾ ಕೂಡಲಸಂಗಮದೇವಾ.

6. ’ಕರಿಘನ ಅಂಕುಶ ಕಿರಿದೆ’ನ್ನಬಹುದೆ? ಬಾರದಯ್ಯಾ.
’ಗಿರಿಘನ ವಜ್ರ ಕಿರಿದೆ’ನ್ನಬಹುದೆ? ಬಾರದಯ್ಯಾ.
ತಮ್ಮಂಥ ಘನ ಜ್ಯೋತಿ ಕಿರಿದೆನ್ನಬಹುದೆ? ಬಾರದಯ್ಯ.
’ಮರಹು ಘನ ನಿಮ್ಮ ನೆನೆವ ಮನ ಕಿರಿದೆ’ನ್ನಬಹುದೆ? ಬಾರದಯ್ಯಾ
ಕೂಡಲಸಂಗಮದೇವಾ.

Basavanna Vachana in Kannada

7. ಭವಬಂಧನ ಭವಪಾಶವಾದ ಕಾರಣವೇನಯ್ಯಾ?
ಹಿಂದಣ ಜನ್ಮದಲಿ ಲಿಂಗವ ಮರೆದೆನಾಗಿ,
ಹಿಂದಣ ಸಿರಿಯಲ್ಲಿ ಜಂಗಮನ ಮರೆದೆನಾಗಿ
ಅರಿದೋಡೀ ಸಂಸಾರವ ಹೊದ್ದಲೀವನೆ ಕೂಡಲಸಂಗಮದೇವಾ.

8. ಸಂಸಾರ ಸಾಗರನ ತೆರೆಕೊಬ್ಬಿ ಮುಖದ ಮೇಲೆ ಅಲೆಯುತ್ತಿದ್ದುದೇ ನೋಡಾ!
ಸಂಸಾರಸಾಗರ ಉರದುದ್ದವೇ? ಹೇಳಾ! ಸಂಸಾರ ಸಾಗರ ಕೂರಲುದ್ದವೇ?
ಹೇಳಾ? ಸಂಸಾರ ಸಾಗರ ಸಿರದುದ್ದವಾದ ಬಳಿಕ ಏನ ಹೇಳುವೆನಯ್ಯಾ?
ಅಯ್ಯಾ, ಅಯ್ಯಾ, ಎನ್ನ ಹುಯ್ಯಲ ಕೇಳಯ್ಯ? ಕೂಡಲಸಂಗಮದೇವಾ ನಾನೇನೆನುವೆನಯ್ಯಾ?

9. ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ
ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯಾ!
ಇಂದೆನ್ನ ದೇಹಕ್ಕೆ ಗ್ರಹಣವಾಯಿತು,
ಇನ್ನೆಂದಿಗೆ ಮೋಕ್ಶವಹುದೋ ಕೂಡಲಸಂಗಮದೇವಾ

10. ಇಲಿ ಗಡಹನೊಡ್ಡಿದಲ್ಲಿರ್ಪಂತೆ ಎನ್ನ ಸಂಸಾರ ತನು ಕೆಡುವನ್ನಕ್ಕ ಮಾಣದು;
ಹೆರರ ಬಾಧಿಸುವುದು ತನು ಕೆಡುವನ್ನಕ್ಕಮಾಣದು.
ಹೆರರ ಚ್ಹಿದ್ರಿಸುವುದು ತನು ಕೆಡುವನ್ನಕ್ಕ ಮಾಣದು
ಅಕಟಕಟಾ! ಸಂಸಾರಕ್ಕಾಸತ್ತೆ ಕೂಡಲಸಂಗಮದೇವಾ.

11. ಕಪ್ಪೆ ಸರ್ಪನ ನೆಳಲಲ್ಲಿಪ್ಪಂತೆನಗಾಯಿತ್ತಯ್ಯಾ!
ಅಕಟಕಟಾ ಸಂಸಾರ ವೃಥಾ ಹೋಯಿತಲ್ಲಾ!
ಕರ್ತುವೇ ಕೂಡಲಸಂಗಮದೇವಾ
ಇವ ತಪ್ಪಿಸಿ ಎನ್ನನು ರಕ್ಶಿಸಯ್ಯಾ.

12. ಶೂಲದ ಮೇಲಣ ವಿಭೋಗವೇನಾದೊಡೇನೋ?
ನಾನಾವರ್ಣದ ಸಂಸಾರ ಹಾವ-ಹಾವಡಿಗನ ಸ್ನೇಹದಂತೆ!
ತನ್ನಾತ್ಮ ತನಗೆ ಹಗೆಯಾದ ಬಳಿಕ ಬಿನ್ನಾಣವುಂಟೆ!
ಮಹಾದಾನಿ ಕೂಡಲಸಂಗಮದೇವಾ.

13. ಸಂಸಾರವೆಂಬ ಬಲೆಯಲ್ಲಿ ಸಿಲುಕಿದೆನಯ್ಯಾ,
ಎನ್ನನು ಕಾಯಯ್ಯಾ ಸಂಗಮದೇವಾ ಹುರುಳಿಲ್ಲ ಹುರುಳಿಲ್ಲ!
ಶಿವಧೋ! ಶಿವಧೋ!

14. ನಾನೊಂದು ನೆನೆದೊಡೆ ತಾನೊಂದು ನೆನೆವುದು,
ನಾವಿತ್ತಲೆಳೆ ದೊಡೆ ತಾನತ್ತಲೆಳೆವುದು;
ತಾ ಬೇರೆಯೆನ್ನನಳಲಿಸಿ ಕಾಡಿತ್ತು.
ತಾ ಬೇರೆಯೆನ್ನ ಬಳಲಿಸಿ ಕಾಡಿತ್ತು.
ಕೂಡಲಸಂಗನ ಕೂಡಿಹೆನೆಂದೊಡೆ ತಾನೆನ್ನ ಮುಂದುಗೆಡಿಸಿತ್ತು ಮಾಯೆ!

15. ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ!
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ!
ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ!
ಇದಾವ ಪರಿಯಲ್ಲಿ ಕಾಡಿತ್ತು ಮಾಯೆ
ಈ ಮಾಯೆಯ ಕಳೆವೊಡೆ ಯೆನ್ನಳವಲ್ಲ,
ನೀವೇ ಬಲ್ಲಿರಿ ಕೂಡಲಸಂಗಮದೇವಾ.

 

ಕನ್ನಡ ವಚನಗಳು | Basavanna Vachanagalu in Kannada Writing

16. ಕೊಡೆವಿಡಿದು ಕುದುರೆಯ ದೃಢವುಳ್ಳ ರಾವುತನೇರಿ ಕೊಡೆ
ಕೋಟಿ, ಶೂರರು, ಹನ್ನಿಬ್ಬರಯ್ಯಾ! ಚ.ದ್ರಕಾಂತ ಗಿರಿಯ
ಗಜ ಬಂದು ಮೂದಲಿಸಿ ಅರಿದು ಕೊಲುವೊಡೆ ರಿಪುಗಳ ಕಲಿತನವನೋಡಾ!
ಅವಿಗೆಯೊಳಡಗಿದ ಪುತ್ಥಳಿಯ ರೂಹಿನಂತಾಯಿತ್ತು,
ಕೂಡಲಸಂಗಮದೇವಾ ನಿಮ್ಮ ಹೆಸರಿಲ್ಲದ ಹೆಸರು.

17. ಇಂದಿಗೆಂತು ನಾಳಿಗೆಂತು ಎಂದು ಬೆಂದೊಡಲ ಹೊರೆಯ
ಹೋಯಿತ್ತೆನ್ನ ಸಂಸಾರ! ಹಿಂದೆ ನಾನಾ ಯೋನಿಯಲ್ಲಿ ಬಂದೆನೆಂಬ
ಹೇಯವಿಲ್ಲಾ; ಮುಂದೆ ಮುಕ್ತಿಯಾಗಬೇಕೆಂಬ ಯುಕ್ತಿಯಿಲ್ಲಾ!
ಎಂದೆಂದೂ ಸದಾಶಿವನ ಕುಂದದೆ ನೆನೆಯಲೀಯದೆ
ಕೊಂದುದಯ್ಯಾ ಈ ಮಾಯೆ ಕೂಡಲಸಂಗಮದೇವಾ.

18. ದಿಟ ಪುಟ ಭಕುತಿ ಸಂಪುಟ ನೆಲೆಗೊಳ್ಳದಾಗಿ
ಟಿಂಬಕನನಾಡಿಸುತ್ತಿದ್ದಿತಯ್ಯಾ ನಿನ್ನ ಮಾಯೆ;
ಟೀಕವ ಟಿಂಬಕನಾಡಿಸುತ್ತಿದ್ದಿತಯ್ಯಾ ನಿನ್ನ ಮಾಯೆ;
ಕೂಡಲಸಂಗಮದೇವಯ್ಯಾ, ಹೊನ್ನ ಹೆಣ್ಣ ಮಣ್ಣ ತೋರಿ.

19.  ಆಸತ್ತೆ ಅಲಸಿದೆನೆಂದಡೆ ಮಾಣದು,
ಬೇಸತ್ತೆ ಬೆಂಬಿದ್ದೆನೆಂದಡೆ ಮಾಣದು,
ಏವೆನೇವೆನೆಂದಡೆ ಮಾಣದು,
ಕಾಯದ, ಕರ್ಮದ ಫಲಭೋಗವು !
ಕೂಡಲಸಂಗನ ಶರಣರು ಬಂದು
ಹೋ ಹೋ, ಅಂಜದಿರೆಂದಡಾನು ಬದುಕುವೆನು.

20. ಎಂದೊ, ಸಂಸಾರದ ದಂದುಗ ಹಿಂಗುವುದು ?
ಎಂದೊ, ಮನದಲ್ಲಿ ಪರಿಣಾಮವಹುದೆನಗೆಂದೋ, ಎಂದೋ ?
ಕೂಡಲಸಂಗಮದೇವಾ,
ಇನ್ನೆಂದೋ ಪರಮಸಂತೋಷದಲ್ಲಿಹುದೆನಗೆಂದೋ.

21   ಅರಿಯದೆ ಜನನಿಯ ಜಠರದಲ್ಲಿ
ಬಾರದ ಭವಂಗಳ ಬರಿಸಿದೆ ತಂದೆ,
ಹುಟ್ಟಿತ್ತೆ ತಪ್ಪಾಯಿತ್ತೆ, ಎಲೆ ಲಿಂಗವೆ ?
ಮುನ್ನ ಹುಟ್ಟಿದುದಕ್ಕೆ ಕೃಪೆಯ ಮಾಡು ಲಿಂಗವೆ !
ಇನ್ನು ಹುಟ್ಟಿದಡೆ ಕೂಡಲಸಂಗಮದೇವಾ, ನಿಮ್ಮಾಣೆ.

 

22    ಲೇಸ ಕಂಡು ಮನ ಬಯಸಿ ಬಯಸಿ
ಆಸೆ ಮಾಡಿದಡಿಲ್ಲ ಕಂಡಯ್ಯಾ.
ತಾಳಮರಕ್ಕೆ ಕೈಯ ನೀಡಿ
ಮೇಲೆ ನೋಡಿ ಗೋಣು ನೊಂದುದಯ್ಯಾ.
ಕೂಡಲಸಂಗಮದೇವಾ ಕೇಳಯ್ಯಾ,
ನೀನೀವ ಕಾಲಕ್ಕಲ್ಲದಿಲ್ಲ ಕಂಡಯ್ಯಾ !

23    ಮುನ್ನ ಮಾಡಿದ ಪಾಪ ಬೆನ್ನ ಬಿಡದನ್ನಕ್ಕ
ಇನ್ನು ಬಯಸಿದಡುಂಟೆ ?
ಭಕ್ತಿಯುಳ್ಳವರ ನೋಡಿ ನೋಡಿ ಬಯಸಿದಡುಂಟೆ,
ಕೂಡಲಸಂಗಮದೇವರಲ್ಲಿ ಮುನ್ನ ವರವ ಹಡೆಯದನ್ನಕ್ಕ?

24    ಚಂದ್ರೋದಯಕ್ಕೆ ಅಂಬುದ್ಥಿ ಹೆಚ್ಚುವುದಯ್ಯಾ,
ಚಂದ್ರ ಕುಂದೆ, ಕುಂದುವುದಯ್ಯಾ.
ಚಂದ್ರಂಗೆ ರಾಹು ಅಡ್ಡ ಬಂದಲ್ಲಿ
ಅಂಬುದ್ಥಿ ಬೊಬ್ಬಿಟ್ಟಿತ್ತೆ ಅಯ್ಯಾ
ಅಂಬುದ್ಥಿಯ ಮುನಿ ಆಪೋಶನವ ಕೊಂಬಲ್ಲಿ
ಚಂದ್ರಮನಡ್ಡ ಬಂದನೆ, ಅಯ್ಯಾ ?
ಆರಿಗಾರೂ ಇಲ್ಲ, ಕೆಟ್ಟವಂಗೆ ಕೆಳೆಯಿಲ್ಲ,
ಜಗದ ನಂಟ ನೀನೆ, ಅಯ್ಯಾ,
ಕೂಡಲಸಂಗಮದೇವಯ್ಯಾ!

25    ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೆ
ಧರೆ ಹತ್ತಿ ಉರಿದಡೆ ನಿಲಲುಬಾರದು.
ಏರಿ ನೀರುಂಬಡೆ, ಬೇಲಿ ಕೆಯ್ಯ ಮೇವಡೆ,
ನಾರಿ ತನ್ನ ಮನೆಯಲ್ಲಿ ಕಳುವಡೆ,
ತಾಯ ಮೊಲೆವಾಲು ನಂಜಾಗಿ ಕೊಲುವಡೆ,
ಇನ್ನಾರಿಗೆ ದೂರುವೆ ಕೂಡಲಸಂಗಮದೇವಾ !

26  ವಶ್ಯವ ಬಲ್ಲೆವೆಂದೆಂಬಿರಯ್ಯಾ,
ಬುದ್ಧಿಯನರಿಯದ ಮನುಜರು ಕೇಳಿರಯ್ಯಾ.
ವಶ್ಯವಾವುದೆಂದರಿಯದೆ ಮರುಳುಗೊಂಬಿರಿ,
ಎಲೆ ಗಾವಿಲ ಮನುಜರಿರಾ.
ಓಂ ನಮಃ ಶಿವಾಯ ಎಂಬ ಮಂತ್ರ ಸರ್ವಜನವಶ್ಯ
ಕೂಡಲಸಂಗಮದೇವಾ.

27    ಬೆದಕದಿರು ಬೆದಕದಿರು, ಬೆದಕಿದಡೆ ಹುರುಳಿಲ್ಲ,
ಚಿತ್ತರಟ್ಟೆಯ ಕಾಯಲ್ಲಿ ಮತ್ತೇನನರಸುವಿರಯ್ಯಾ
ನಿಮ್ಮ ಉತ್ತಮಿಕೆಯ ಪೂರೈಸುವುದು
ಕೂಡಲಸಂಗಮದೇವಾ.

28  ಭವಬಂಧನ ದುರಿತಂಗಳ ಗೆಲುವಡೆ
ಓಂ ನಮಃ ಶಿವಶರಣೆಂದಡೆ ಸಾಲದೆ
ಹರ ಹರ ಶಂಕರ, ಶಿವ ಶಿವ ಶಂಕರ,
ಜಯ ಜಯ ಶಂಕರ ಶರಣೆನುತ್ತಿದ್ದೇನೆ.
ಎನ್ನ ಪಾತಕ ಪರಿಹರ,
ಕೂಡಲಸಂಗಮದೇವಾ ಶರಣೆನುತ್ತಿದ್ದೇನೆ

29    ಎನ್ನ ನಡೆಯೊಂದು ಪರಿ, ಎನ್ನ ನುಡಿಯೊಂದು ಪರಿ,
ಎನ್ನೊಳಗೇನೂ ಶುದ್ಧವಿಲ್ಲ ನೋಡಯ್ಯಾ.
ನುಡಿಗೆ ತಕ್ಕ ನಡೆಯ ಕಂಡಡೆ
ಕೂಡಲಸಂಗಮದೇವನೊಳಗಿಪ್ಪನಯ್ಯಾ.

30   ಮುಂಗೈಯ ಕಂಕಣಕ್ಕೆ ಕನ್ನಡಿಯ ತೋರುವಂತೆ
ಎನ್ನ ಮನವು ನಿಧಾನವನೊಲ್ಲದೆ ಜಲಗ ಮಚ್ಚಿತ್ತು ನೋಡಾ.
ನಾಯಿಗೆ ನಾರಿವಾಣವಕ್ಕುವುದೆ
ಕೂಡಲಸಂಗಮದೇವಾ.

 

Basavanna Vachanagalu in Kannada

31  ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು,
ನಿಂದಲ್ಲಿ ನಿಲಲೀಯದೆನ್ನ ಮನವು,
ಹೊಂದಿದಲ್ಲಿ ಹೊಂದಲೀಯದೆನ್ನ ಮನವು
ಕೂಡಲಸಂಗಮದೇವಾ
ನಿಮ್ಮ ಚರಣಕಮಲದಲ್ಲಿ ಭ್ರಮರನಾಗಿರಿಸು, ನಿಮ್ಮ ಧರ್ಮ.

32    ಮರನನೇರಿದ ಮರ್ಕಟನಂತೆ
ಹಲವು ಕೊಂಬೆಗೆ ಹಾಯುತ್ತಲಿದ್ದೇನೆ,
ಬೆಂದ ಮನವ ನಾನೆಂತು ನಂಬುವೆನಯ್ಯಾ
ಎಂತು ನಚ್ಚುವೆನಯ್ಯಾ
ಎನ್ನ ತಂದೆ ಕೂಡಲಸಂಗಮದೇವನಲ್ಲಿಗೆ
ಹೋಗಲೀಯದಯ್ಯಾ

.
33   ಅಂದಣವನೇರಿದ ಸೊಣಗನಂತೆ
ಕಂಡಡೆ ಬಿಡದು ತನ್ನ ಮುನ್ನಿನ ಸ್ವಭಾವವನು.
ಸುಡು, ಸುಡು, ಮನವಿದು ವಿಷಯಕ್ಕೆ ಹರಿವುದು,
ಮೃಡ ನಿಮ್ಮನನುದಿನ ನೆನೆಯಲೀಯದು.
ಎನ್ನೊಡೆಯ ಕೂಡಲಸಂಗಮದೇವಾ
ನಿಮ್ಮ ಚರಣವ ನೆನೆವಂತೆ ಕರುಣಿಸು-
ಸೆರಗೊಡ್ಡಿ ಬೇಡುವೆ, ನಿಮ್ಮ ಧರ್ಮ.

34   ತುಪ್ಪದ ಸವಿಗೆ ಅಲಗ ನೆಕ್ಕುವ ಸೊಣಗನಂತೆ ಎನ್ನ ಬಾಳುವೆ.
ಸಂಸಾರಸಂಗವ ಬಿಡದು ನೋಡೆನ್ನ ಮನವು.
ಈ ನಾಯಿತನವ ಮಾಣಿಸು-
ಕೂಡಲಸಂಗಮದೇವಯ್ಯಾ, ನಿಮ್ಮ ಧರ್ಮ.

35    ಒಂದು ಮೊಲಕ್ಕೆ ನಾಯನೊಂಬತ್ತು ಬಿಟ್ಟಂತೆ,
ಎನ್ನ ಬಿಡು, ತನ್ನ ಬಿಡು ಎಂಬುದು ಕಾಯವಿಕಾರ,
ಎನ್ನ ಬಿಡು, ತನ್ನ ಬಿಡು, ಎಂಬುದು ಮನೋವಿಕಾರ.
ಕರಣೇಂದ್ರಿಯಂಗಳೆಂಬ ಸೊಣಗ ಮುಟ್ಟದ ಮುನ್ನ
ಮನ ನಿಮ್ಮನೈದುಗೆ, ಕೂಡಲಸಂಗಮದೇವಾ.

36     ದಂದುಗ ಬಿಡದು ಮನದ ಸಂದೇಹ ಹಿಂಗದಾಗಿ :
ಮುಂದೆ ಲಿಂಗವ ಕಂಡೆಹೆನೆಂಬುದು ಹುಸಿ ನೋಡಾ.
ಬೆಂದ ಕರಣಾದಿಗಳು ಒಂದೆ ಪಥವನರಿಯವು,
ಎಂತು ಶಿವಪಥವೆನಗೆ ಸಾಧ್ಯವಪ್ಪುದಯ್ಯಾ
ಎನ್ನ ತಂದೆ ಕೂಡಲಸಂಗಮದೇವಾ,
ನಿಮ್ಮ ಶರಣರ ಬಳಿವಿಡಿದಡೆ ಎನ್ನ ದಂದುಗ ಹಿಂಗುವುದು.

37   ತನ್ನ ವಿಚಾರಿಸಲೊಲ್ಲದು, ಇದಿರ ವಿಚಾರಿಸಹೋಹುದೀ ಮನವು.
ಏನ ಮಾಡುವೆನೀ ಮನವನು, ಎಂತು ಮಾಡುವೆನೀ ಮನವನು.
ಕೂಡಲಸಂಗಮದೇವನ ಶರಣರ
ನಚ್ಚದ ಮಚ್ಚದ ಬೆಂದ ಮನವನು.

38   ತನ್ನಿಚ್ಛೆಯ ನುಡಿದಡೆ ಮೆಚ್ಚುವುದೀ ಮನವು,
ಇದಿರಿಚ್ಚೆಯ ನುಡಿದಡೆ ಮೆಚ್ಚದೀ ಮನವು.
ಕೂಡಲಸಂಗನ ಶರಣರ
ನಚ್ಚದ ಮಚ್ಚದ ಮನವ ಕಿಚ್ಚಿನೊಳಗಿಕ್ಕು.

39   ಸುಡಲೀ ಮನವೆನ್ನನುಡುಹನ ಮಾಡಿತ್ತು,
ನಡೆವಲ್ಲಿ ನುಡಿವಲ್ಲಿ ಅಧಿಕನೆಂದೆನಿಸಿತ್ತು.
ಬೆಡಗಿನ ಕೀಲು ಕಳೆದು ಕೆಡೆದ ಬಳಿಕ
ಕಡುಗೂರ್ಪ ಮಡದಿ ತಾ ಮುಟ್ಟಲಮ್ಮಳು,
ಒಡಲನುರಿಕೊಂಬುದು, ಒಡವೆಯನರಸ ಕೊಂಬ,
ಕಡುಗೂರ್ಪ ಮಡದಿಯ ಮತ್ತೊಬ್ಬ ಚೆನ್ನಿಗ ಕೊಂಬ
ಮುನ್ನ ಮಾಡಿದುದು ತನ್ನ ಬೆನ್ನ ಬಿಡದನ್ನಕ್ಕ,
ಇನ್ನು ಮಾಡಿದರಳವೆ ಕೂಡಲಸಂಗಮದೇವಾ

.
40    ವಚನದ ಹುಸಿ ನುಸುಳೆಂತು ಮಾಬುದೆನ್ನ
ಮನದ ಮರ್ಕಟತನವೆಂತು ಮಾಬುದೆನ್ನ
ಹೃದಯದ ಕಲ್ಮಷವೆಂತು ಮಾಬುದೆನ್ನ
ಕಾಯವಿಕಾರಕ್ಕೆ ತರಿಸಲುವೋದೆನು,
ಎನಗಿದು ವಿಧಿಯೇ, ಕೂಡಲಸಂಗಮದೇವಾ.

 

40+ Basavanna Vachanagalu Kannada
  • ಅಂಗದ ನಮಾಫಟವು ಸಿಂಗದ ಗಾತ್ರವು,
    ಹಿಂಗದು ಮನದಲ್ಲಿ ನಾನಾ ವಿಕಾರವು.
    ಬಂದೆಹೆನೆಂದರಿಯಲಿಲ್ಲಾಗಿ, ಸಂದೇಹ ಬಿಡದಾಗಿ,
    ಮುಂದುಗಾಣದು ಲೋಕ,
    ಬೆಂದ ಮಾಯಕ್ಕಂಜಿ ನಿಮ್ಮ ಮರೆವೊಕ್ಕೆ,
    ಕೂಡಲಸಂಗಮದೇವಾ.

 

  • ವಿಕಳನಾದೆನು ಪಂಚೇಂದ್ರಿಯ ಸಪ್ತಧಾತುವಿನಿಂದ,
    ಮತಿಗೆಟ್ಟೆನು ಮನದ ವಿಕಾರದಿಂದ,
    ಧೃತಿಗೆಟ್ಟೆನು ಕಾಯವಿಕಾರದಿಂದ,
    ಧೃತಿಗೆಟ್ಟೆನು ಕಾಯವಿಕಾರದಿಂದ,
    ಶರಣುವೊಕ್ಕೆನು ಕೂಡಲಸಂಗಮದೇವಯ್ಯಾ

 

  • .ಮುನಿದೆಯಾದಡೆ ಒಮ್ಮೆ ಜರೆದಡೆ ಸಾಲದೆ
    ಅಕಟಕಟಾ, ಮದನಂಗೆ ಮಾರುಗೊಡುವರೆ
    ಹಗೆಗೆ ಮಾರುಗೊಟ್ಟು ನಿನ್ನವರನೊಪ್ಪಿಸುವರೆ
    ಕೂಡಲಸಂಗಮದೇವಾ.

 

  • 44   ಆನು ಒಬ್ಬನು, ಸುಡುವರೈವರು,
    ಮೇಲೆ ಕಿಚ್ಚು ಘನ, ನಿಲಲುಬಾರದು.
    ಕಾಡ ಬಸವನ ಹುಲಿ ಕೊಂಡೊಯ್ದಡೆ
    ಆರೈಯಲಾಗದೆ ಕೂಡಲಸಂಗಮದೇವಾ.

 

  • 45   ಆಸೆ, ಆಮಿಷ, ತಾಮಸ, ಹುಸಿ, ವಿಷಯ,
    ಕುಟಿಲ, ಕುಹಕ, ಕ್ರೋಧ, ಕ್ಷುದ್ರ, ಮಿಥ್ಯೆ-
    ಇವನೆನ್ನ ನಾಲಗೆಯ ಮೇಲಿಂದತ್ತ ತೆಗೆದು ಕಳೆಯಯ್ಯಾ.
    ಅದೇಕೆಂದಡೆ, ನಿನ್ನತ್ತಲೆನ್ನ ಬರಲೀಯವು.
    ಇದು ಕಾರಣ, ಇವೆಲ್ಲವ ಕಳೆದು
    ಎನ್ನ ಪಂಚೈವರ, ಭಕ್ತರ ಮಾಡು ಕೂಡಲಸಂಗಮದೇವಾ.

 

  • ಎಂತು ಶಿವಭಕ್ತಿಯ ನಾನುಪಮಿಸುವೆನಯ್ಯಾ
    ಎಂತು ಶಿವಾಚಾರವೆನಗೆ ವೇದ್ಯವಪ್ಪುದೋ ಅಯ್ಯಾ
    ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರದಿಂದ ಕಟ್ಟುವಡೆದೆನು.
    ಹಸಿವು, ತೃಷೆ, ವ್ಯಸನದಿಂದ ಕುದಿಯುತ್ತಿದ್ದೇನೆ.
    ಪಂಚೇಂದ್ರಿಯ, ಸಪ್ತಧಾತು
    ಹರಿಹಂಚುಮಾಡಿ ಕಾಡಿಹವಯ್ಯಾ,
    ಅಯ್ಯಾ, ಅಯ್ಯಾ ಎನ್ನ ಹುಯ್ಯಲ ಕೇಳಯ್ಯಾ
    ಕೂಡಲಸಂಗಮದೇವಾ, ನಾನೇವೆನೇವೆನಯ್ಯಾ.

 

  • ಕಾಯವಿಕಾರ ಕಾಡಿಹುದಯ್ಯಾ,
    ಮನೋವಿಕಾರ ಕೂಡಿಹುದಯ್ಯಾ.
    ಇಂದ್ರಿಯ ವಿಕಾರ ಸುಳಿವುದಯ್ಯಾ !
    ಸುಳುವಿನೊಳಗೆ ಸುಳಿವುತ್ತಲಿದ್ದೇನೆ, ಸಿಲುಕಿಸದಿರಯ್ಯಾ !
    ಅನ್ಯ ಚಿತ್ತದಲ್ಲಿರಿಸದಿರಯ್ಯಾ, ನಿಮ್ಮ ಚಿತ್ತದಲ್ಲಿರಿಸಯ್ಯಾ.
    ಅನುಪಮಸುಖಸಾರಾಯ ಶರಣರಲ್ಲಿ-
    ಕೂಡಲಸಂಗಮದೇವಯ್ಯಾ, ಇದನೆ ಬೇಡುವೆನಯ್ಯಾ.

 

  • ಬಂದ ಯೋನಿಯನರಿದು ಸಲಹೆನ್ನ ತಂದೆ.
    ಬೆಂದ ಮನವೆನ್ನ ಗತಿಗೆಡಿಸಿ ಕಾಡಿತ್ತು,
    ಬೆಂದ ಮನವೆನ್ನ ಮತಿಗೆಡಿಸಿ ಕಾಡಿತ್ತು,
    ಎನ್ನ ತಂದೆ ಕೂಡಲಸಂಗಮದೇವಾ, ಮಾಣಿಸು ನಿಮ್ಮ ಧರ್ಮ.

 

  • ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿ
    ತಿಳಿಯಲೀಯದು, ಎಚ್ಚರಲೀಯದು.
    ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯಾ, ಲಿಂಗತಂದೆ
    ಸುಳಿದೆಗೆದು ಬೆಳೆವೆನು ಕೂಡಲಸಂಗಮದೇವಾ.

 

  • ವಿಷಯವೆಂಬ ಹಸುರನೆನ್ನ ಮುಂದೆ ತಂದು ಪಸರಿಸಿದೆಯಯ್ಯಾ.
    ಪಶುವೇನ ಬಲ್ಲುದು ಹಸುರೆಂದೆಠಸುವುದು.
    ವಿಷಯರಹಿತನ ಮಾಡಿ, ಭಕ್ತಿರಸವ ದಣಿಯೆ ಮೇಯಿಸಿ,
    ಸುಬುದ್ಧಿಯೆಂಬ ಉದಕವನೆರೆದು,
    ನೋಡಿ ಸಲಹಯ್ಯಾ, ಕೂಡಲಸಂಗಮದೇವಾ.

 

  • ಕೆಸರಲ್ಲಿ ಬಿದ್ದ ಪಶುವಿನಂತೆ
    ಆನು ದೆಸೆದೆಸೆಗೆ ಬಾಯ ಬಿಡುತ್ತಿದ್ದೇನೆ, ಅಯ್ಯಾ.
    ಆರೈವವರಿಲ್ಲ, ಅಕಟಕಟ !
    ಪಶುವೆಂದೆನ್ನ ಕೂಡಲಸಂಗಮದೇವ ಕೊಂಬ ಹಿಡಿದೆತ್ತುವನ್ನಕ್ಕ.

 

  • ಬಡಪಶು ಪಂಕದಲ್ಲಿ ಬಿದ್ದಡೆ
    ಕಾಲ ಬಡಿವುದಲ್ಲದೆ, ಬೇರೆ ಗತಿಯುಂಟೆ
    ಶಿವ ಶಿವ ಹೋದೆಹೆ, ಹೋದೆಹೆನಯ್ಯಾ.
    ನಿಮ್ಮ ಮನದತ್ತಲೆನ್ನ ತೆಗೆಯಯ್ಯಾ.
    ಪಶುವಾನು, ಪಶುಪತಿ ನೀನು,
    ತುಡುಗುಣಿಯೆಂದು ಎನ್ನ ಹಿಡಿದು ಬಡಿಯದ ಮುನ್ನ
    ಒಡೆಯಾ ನಿಮ್ಮ ಬಯ್ಯದಂತೆ ಮಾಡು,
    ಕೂಡಲಸಂಗಮದೇವಾ.

 

  • ಅಡವಿಯೊಳಗೆ ಹೊಲಬುಗೆಟ್ಟ ಪಶುವಿನಂತೆ
    `ಅಂಬೆ ಅಂಬೆ’ ಎಂದು ಕರೆವುತ್ತಲಿದ್ದೇನೆ,
    `ಅಂಬೆ ಅಂಬೆ’ ಎಂದು ಒರಲುತ್ತಲಿದ್ದೇನೆ,
    ಕೂಡಲಸಂಗಮದೇವ `ಬಾಳು ಬಾಳೆಂಬನ್ನಕ್ಕ.

 

  • ಅಯ್ಯಾ, ಅಯ್ಯಾ, ಎಂದು ಕರೆವುತ್ತಲಿದ್ದೇನೆ.
    ಅಯ್ಯಾ, ಅಯ್ಯಾ, ಎಂದು ಒರಲುತ್ತಲಿದ್ದೇನೆ.
    ಓ ಎನ್ನಲಾಗದೆ ಅಯ್ಯಾ
    ಆಗಳೂ ನಿಮ್ಮ ಕರೆವುತ್ತಲಿದ್ದೇನೆ
    ಮೋನವೇ ಕೂಡಲಸಂಗಮದೇವಾ.

ಇನ್ನೂ ಹೆಚ್ಚಿನ ಬಸವಣ್ಣನ ವಚನಗಳನ್ನು ನೀವು ಹುಡುಕುತ್ತಿದ್ದರೆ ಕನ್ನಡ ಥಾಟ್ಸ್ ಆಪನ್ನು ಡೌನ್ಲೋಡ್ ಮಾಡಿ: Download Basavanna Kannada App Click Here

ಇನ್ನು ಹೆಚ್ಚಿನ ವಿಷಯಗಳನ್ನು  ಓದಿ: 

Kannada Kavanagalu

Kannada Quotes

Leave a Reply

Your email address will not be published. Required fields are marked *

rtgh