Dr Masti Venkatesha Iyengar Information in Kannada | ಮಾಸ್ತಿ ವೆಂಕಟೇಶ ಅಯ್ಯಂಗಾರ್

ಮಾಸ್ತಿ ವೆಂಕಟೇಶ ಅಯ್ಯಂಗಾರ್ ಜೀವನ ಚರಿತ್ರೆ, Dr Masti Venkatesha Iyengar Information in Kannada, Information About Masti Venkatesha Iyengar Kannada Masti Venkatesha Iyengar History in Kannada Masti Venkatesha Iyengar Biography in Kannada Masti Venkatesha Iyengar Jeevana Charitre in Kannada

ಮಾಸ್ತಿ ವೆಂಕಟೇಶ ಅಯ್ಯಂಗಾರ್ ರವರು 1891 ರ ಜೂನ್ 6 ರಲ್ಲಿ ಜನಿಸಿದರು. ಹುಟ್ಟೂರು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಹೊಂಗೇನಹಳ್ಳಿ. ತಂದೆ ರಾಮಸ್ವಾಮಿ ಅಯ್ಯಂಗಾರ್, ಹಾಗು ತಾಯಿ ತಿರುಮಲಮ್ಮ.

ಬಾಲ್ಯ ಜೀವನ

ಇವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಹಿರಿಯರದು. ಮಾಸ್ತಿ ವೆಂಕಟೇಶ ಅಯ್ಯಂಗಾರರು “ಪೆರಿಯಾತ್” ಎಂಬ ಮನೆತನದವರು.

ಇದರ ಅರ್ಥ ದೊಡ್ಡ ಮನೆಯವರು ಎಂದು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ನಡೆಯಿತು.

ಹೊಂಗೇನಳ್ಳಿ, ಯಲಂದೂರು, ಶಿವಾರಪಟ್ಟಣ, ಮಳವಳ್ಳಿ, ಮೈಸೂರು, ಕಡೆಗೆ ಮದರಾಸು ಹೀಗೆ ನಾನಾ ಕಡೆಗಳಲ್ಲಿ ತಮ್ಮ ಸಂಬಂದಿಕರ ನೆರವಿನಿಂದ ವಿದ್ಯಾಭ್ಯಾಸ ಮಾಡಿ ಎಂ.ಎ ಪದವಿ ಗಳಿಸಿದರು.

ಸರ್ಕಾರದಲ್ಲಿ ಅಸಿಸ್ಟೆಂಟ್ ಕಮೀಶನರಾಗಿ ಕೆಲಸಕ್ಕೆ ಸೇರಿ  ಕೆಲಸ ನಿರ್ವಹಿಸಿದರು.
ಸಾಹಿತ್ಯ ರಚನೆ ಅವರ ಪ್ರವೃತ್ತಿಯಾಗಿ ಬೆಳೆಯಿತು.

ಸುಬ್ಬಣ್ಣ” ಅವರ ಒಂದು ಖ್ಯಾತ ನೀಳ್ಗತೆ. ಅಪಾರ ಮಾನವೀಯ ಅಂತಃಕರಣವನ್ನು ಕತೆಯಲ್ಲಿ ತುಳುಕಿಸಿದ ಅವರು ಕಥೆಗಳ ರಚನೆಗೆ ಬಳಸಿದ ತಂತ್ರ ಅಪರೂಪದ್ದಾಗಿದೆ. ಸಣ್ಣ ಕಥೆಗಳ ಜನಕರೆಂದೇ ಅವರಿಗೆ ಕರೆಯುತ್ತಿದ್ದ ರು.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಅವರ ಕಥೆಗಳ ಸಂಕಲನಗಳಿಗೆ ಲಭಿಸಿತು. ಕಥೆ ಹೇಳುವುದು ಒಂದು ಪುಣ್ಯದ ಕೆಲಸವೆಂದು ಅವರು ಭಾವಿಸಿದ್ದರು.

ಭಾರತತೀರ್ಥ“, “ಆದಿಕವಿ ವಾಲ್ಮೀಕಿ” ಇವು ಭಾರತ ರಾಮಾಯಣಗಳನ್ನು ಕುರಿತು ಬರೆದಿರುವ ಗ್ರಂಥಗಳಾದರೆ “ಶ್ರೀರಾಮ ಪಟ್ಟಾಭಿಷೇಕ” ಅವರ ಒಂದು ಕಾವ್ಯ.

ಮಾಸ್ತಿ ಬರೆದ ಕಾದಂಬರಿಗಳು ಎರಡು. ಜ್ಞಾನಪೀಠ ಪ್ರಶಸ್ತಿ ಗಳಿಸಿದ ಕೃತಿ ಚಿಕವೀರ ರಾಜೇಂದ್ರ – ಕೊಡಗಿನ ಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತದ್ದು, ಮತ್ತೊಂದು “ಚನ್ನಬಸವನಾಯಕ“.
ಭಾವ” – ಮಾಸ್ತಿ ಅವರ ಆತ್ಮಕಥೆ ಇರುವ ಮೂರು ಸಂಪುಟಗಳ ಗ್ರಂಥಮುಖ್ಯ ಕೃತಿಗಳು,

ಜೀವನ ಚರಿತ್ರೆ 

ರವೀಂದ್ರನಾಥ ಠಾಕೂರ್(೧೯೩೫)
ಶ್ರೀ ರಾಮಕೃಷ್ಣ(೧೯೩೬)

ಪ್ರಬಂಧ 
ಕನ್ನಡದ ಸೇವೆ(೧೯೩೦)
ವಿಮರ್ಶೆ (೪ ಸಂಪುಟ ೧೯೨೮-೧೯೩೯)
ಜನತೆಯ ಸಂಸ್ಕೃತಿ(೧೯೩೧)
ಜನಪದ ಸಾಹಿತ್ಯ(೧೯೩೭)
ಆರಂಭದ ಆಂಗ್ಲ ಸಾಹಿತ್ಯ(೧೯೭೯)

ಕಾವ್ಯ ಸಂಕಲನಗಳು

ಬಿನ್ನಹ, ಮನವಿ(೧೯೨೨)
ಅರುಣ(೧೯೨೪)
ತಾವರೆ(೧೯೩೦)
ಸಂಕ್ರಾಂತಿ(೧೯೬೯)
ನವರಾತ್ರಿ(೫ ಭಾಗ ೧೯೪೪-೧೯೫೩)
ಚೆಲುವು, ಸುನೀತ
ಮಲಾರ
ಶ್ರೀರಾಮ ಪಟ್ಟಾಭಿಷೇಕ (ಖಂಡಕಾವ್ಯ)

ನಾಟಕ 

ಶಾಂತಾ, ಸಾವಿತ್ರಿ, ಉಷಾ (೧೯೨೩)
ತಾಳೀಕೋಟೆ(೧೯೨೯)
ಶಿವಛತ್ರಪತಿ(೧೯೩೨)
ಯಶೋಧರಾ(೧೯೩೩)
ಕಾಕನಕೋಟೆ(೧೯೩೮)
ಲಿಯರ್ ಮಾಹಾರಾಜ
ಚಂಡಮಾರುತ, ದ್ವಾದಶರಾತ್ರಿ
ಹ್ಯಾಮ್ಲೆಟ್
ಶೇಕ್ಸ್ ಪಿಯರ್ ದೃಶ್ಯಗಳು ೧,೨,೩
ಪುರಂದರದಾಸ
ಕನಕಣ್ಣ
ಕಾಳಿದಾಸ
ಅಜ್ಜನದಾರಿ, ಭಟ್ಟರಮಗಳು, ವಿಮಲಾ ಮರಿಯಾನ್
ಬಾನುಲಿ ದೃಶ್ಯಗಳು

ಸಣ್ಣಕತೆಗಳ(೫ ಪುಟಗಳು)

ರಂಗನ ಮದುವೆ
ಮಾತುಗಾರ ರಾಮ
ನೀಳ್ಗತೆ ಸಂಪಾದಿಸಿ
ಸುಬ್ಬಣ್ಣ (೧೯೨೮)
ಶೇಷಮ್ಮ(೧೯೭೬)

ಕಾದಂಬರಿ 

ಚೆನ್ನಬಸವ ನಾಯಕ(೧೯೫೦)
ಚಿಕವೀರ ರಾಜೇಂದ್ರ(೧೯೫೬)

ಮಾಸ್ತಿ ಅವರಿಗೆ ಸಂದ ಗೌರವ, ಪ್ರಶಸ್ತಿಗಳು ಅಪಾರ. “ಮಾಸ್ತಿ ಕನ್ನಡದ ಆಸ್ತಿ” ಎಂಬ ಹೇಳಿಕೆ ಒಂದು ನಾಣ್ಣುಡಿಯಾಗಿದೆ.

ಜ್ಞಾನಪೀಠ ಪ್ರಶಸ್ತಿ (೧೯೮೩) (ಚಿಕವೀರ ರಾಜೇಂದ್ರ ಕೃತಿಗೆ)
ಮೈಸೂರು ವಿಶ್ವವಿದ್ಯಾಲಯದ ಡಿ. ಲಿಟ್(೧೯೭೭)
ಕರ್ನಾಟಕ ವಿಶ್ವವಿದ್ಯಾಲಯದ ಡಿ. ಲಿಟ್(೧೯೫೬)
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ(೧೯೬೮)
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪದವಿ(೧೯೫೩)
ದಕ್ಷಿಣ ಭಾರತ ಸಾಹಿತ್ಯಗಳ ಸಮ್ಮೇಳನ ಅಧ್ಯಕ್ಷ ಪದವಿ(೧೯೪೬)

ಎಲ್ಲ ಸಾಹಿತಿಗಳಿಗೂ ಅವರು “ಅಣ್ಣ ಮಾಸ್ತಿ“ಯಾಗಿದ್ದರು. ವರಕವಿ ದ ರಾ ಬೇಂದ್ರೆ ಮಾಸ್ತಿಯವರನ್ನು ಹಿರಿಯಣ್ಣ ಎಂದು ಗೌರವಿಸಿದ್ದರು.

೧    ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮಾಸ್ತಿ ಸೇವೆ ಸಲ್ಲಿಸಿದರು.
೨    ೧೯೨೯ರಲ್ಲಿ ಬೆಳಗಾವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
೩    ಕರ್ನಾಟಕ ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತು.
೪    ಮೈಸೂರು ಮಹಾರಾಜರು “ರಾಜಸೇವಾ ಪ್ರಸಕ್ತ” ಎಂದು ಗೌರವಿಸಿದ್ದರು.
೫    ೧೯೭೨ರಲ್ಲಿ ” ಶ್ರೀನಿವಾಸ ” ಎಂಬ ಅವರ ಅಭಿನಂದನಾ ಗ್ರಂಥ ಪ್ರಕಟವಾಯಿತು.

೧೯೮೩ ರಲ್ಲಿ ಚಿಕವೀರ ರಾಜೇಂದ್ರ ಕಾದಂಬರಿಗಾಗಿ ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡ ಮಾಸ್ತಿಯವರು ಕನ್ನಡಕ್ಕೆ ನಾಲ್ಕನೆ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟರು. ಜೀವನ ಪರ್ಯಂತ ಕನ್ನಡ ಸೇವೆಯನ್ನು ಮಾಡಿದ ಮಾಸ್ತಿಯವರು ಜೂನ್ ೬ ೧೯೮೬ ರಂದು ನಿಧನ ಹೊಂದಿದರು.

FAQ :

ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌ ರವರು ಯಾವಾಗ ಜನಿಸಿದರು?

ಮಾಸ್ತಿ ವೆಂಕಟೇಶ ಅಯ್ಯಂಗಾರ್ ರವರು 1891 ರ ಜೂನ್ 6 ರಲ್ಲಿ ಜನಿಸಿದರು.

ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌ ಅವರು ಯಾವಾಗ ನಿಧನರಾದರು ?

ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌ ಅವರು ಮಾಸ್ತಿಯವರು ಜೂನ್ ೬ ೧೯೮೬ ರಂದು ನಿಧನ ಹೊಂದಿದರು

ಇತರ ವಿಷಯಗಳು :

Mahatma Gandhi Information

Kuvempu Information

ಇನ್ನು ಹೆಚ್ಚಿನ ವಿಷಯಗಳನ್ನು ನೀವು  ತಿಳಿಯಲು ಕೆಳಗಡೆ ನಮ್ಮ ಆಪ್ ಲಿಂಕನ್ನು ಕೊಟ್ಟಿದ್ದೇವೆ ನೀವು ಡೌನ್ಲೋಡ್ ಮಾಡಿ  ಹೆಚ್ಚಿನ ಮಾಹಿತಿಯನ್ನು  ಕನ್ನಡದಲ್ಲಿ ಪಡೆಯಬಹುದಾಗಿದೆ

Kannada Deevige app 

ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ  ವಿಷಯಗಳನ್ನು ಕಲಿಯಿರಿ

ಟೆಲಿಗ್ರಾಮ್ ಗೆ ಜಾಯಿನ್ ಆಗಿ 

ಕನ್ನಡ ದೀವಿಗೆ.in ಜಾಲತಾಣದಲ್ಲಿ ಇರುವ ಪ್ರಬಂಧಗಳ ಕುರಿತು ನಿಮಗೆ ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ಕೆಳಗೆ ಒಂದು ಕಾಮೆಂಟ್ ಅನ್ನು ಮಾಡಿ ತಿಳಿಸಿ.

Leave a Reply

Your email address will not be published. Required fields are marked *

rtgh